ಡಿ.11 ರಂದು ಅಂಚೆ ಅದಾಲತ್ ಸಭೆ

05/12/2020

ಮಡಿಕೇರಿ ಡಿ. 4 : ಅಂಚೆ ಅದಾಲತ್‍ನ ಮುಂದಿನ ಸಭೆಯು ಡಿಸೆಂಬರ್, 11 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿಯಲ್ಲಿ ನಡೆಯಲಿದೆ.
ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದಂತೆ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ಅಂಚೆ ಅದಾಲತ್ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಡಿಸೆಂಬರ್, 09 ರೊಳಗೆ ತಲುಪುವಂತೆ ಕಳುಹಿಸಬೇಕು. ಡಿಸೆಂಬರ್, 11 ರಂದು ನಡೆಯುವ ಸಭೆಯಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಬಂದು ಭಾಗವಹಿಸಬಹುದು ಎಂದು ಕೊಡಗು ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.