ರಾಜ್ಯ ಮಟ್ಟದ ಕಮ್ಮಟ : ಅರ್ಜಿ ಆಹ್ವಾನ

05/12/2020

ಮಡಿಕೇರಿ ಡಿ. 4 : ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕುವೆಂಪು ಸಾಹಿತ್ಯ: ಪರಿಸರಯಾನ ಎಂಬ ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟವು ಡಿಸೆಂಬರ್, 27 ರಿಂದ 29 ರವರೆಗೆ ಕುಪ್ಪಳ್ಳಿ ಕುವೆಂಪು ಪ್ರತಿಷ್ಠಾನ ಇವರ ಸಹಯೋಗದೊಂದಿಗೆ ಶಿವಮೊಗ್ಗ ಜಿಲ್ಲೆಯ ಕುಪ್ಪಳ್ಳಿಯಲ್ಲಿ ನಡೆಯಲಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸುಳ್ಳ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್, 11 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ .

ನಿಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಎನ್.ಕರಿಯಪ್ಪ ಅವರು ತಿಳಿಸಿದ್ದಾರೆ.