Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
9:29 PM Sunday 17-October 2021

ರಾಜ್ಯದಲ್ಲಿ ಕೋವಿಡ್ 2 ನೇ ಅಲೆ

05/12/2020

ಬೆಂಗಳೂರು ಡಿ.5 : ತಾಂತ್ರಿಕ ಸಲಹಾ ಸಮಿತಿ ವರದಿ ಪ್ರಕಾರ ರಾಜ್ಯದಲ್ಲಿ ಜನವರಿ ಅಥವಾ ಫೆಬ್ರವರಿಯಲ್ಲಿ ಕೋವಿಡ್ ಎರಡನೇ ಅಲೆ ಬರುವ ಸಾಧ್ಯತೆ ಇದೆ. ಹೀಗಾಗಿ 45 ದಿನಗಳು ನಿರ್ಣಾಯಕ ಅವಧಿಯಾಗಿದ್ದು, ಈ ಸಂದರ್ಭ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ತಜ್ಞರ ಸಮಿತಿ ಸಲಹೆ ನೀಡಿದೆ ಎಂದರು ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.
ವಿಧಾನ ಸೌಧದಲ್ಲಿಂದು ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ, ಹಿರಿಯ ಅಧಿಕಾರಿಗಳ ಜೊತೆ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್, ಜನವರಿ, ಫೆಬ್ರವರಿ ಮೂರು ತಿಂಗಳು ಭಾರೀ ಚಳಿ ಇರುತ್ತದೆ. ಕರ್ನಾಟಕದಲ್ಲಿ ತಾಂತ್ರಿಕ ಸಲಹಾ ಸಮಿತಿ ವರದಿಯ ಪ್ರಕಾರ ಜನವರಿ ಅಥವಾ ಫೆಬ್ರವರಿಯಲ್ಲಿ ಎರಡನೇ ಅಲೆ ಬರುವ ಸಾಧ್ಯತೆ ಇದೆ. ಕೋವಿಡ್ ಅಲೆ ಬಂದೇ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಬರುವ ಸಾಧ್ಯತೆ ಇದೆ ಎಂಬುದು ತಜ್ಞರ ವಾದವಾಗಿದೆ. ಅದನ್ನು ನಿಯಂತ್ರಿಸುವ ಬಗ್ಗೆಯೂ ಸಲಹೆ ನೀಡಿದ್ದಾರೆ. ತಜ್ಞರು ನೀಡಿದ ಸಲಹೆಯನ್ನು ಮುಖ್ಯ ಮಂತ್ರಿ ಅವರ ಜೊತೆ ಚೆರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಜನರು ಮಾರುಕಟ್ಟೆ, ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರುವುದು ಸಾಮಾನ್ಯವಾಗಿದೆ. ಅದರ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಎಲ್ಲಾ ಧರ್ಮದ ಹಬ್ಬಗಳನ್ನು ನಿಯಂತ್ರಿಸಬೇಕು. ಮದುವೆ, ಸಮಾರಂಭದಲ್ಲಿ 100 ಜನಕ್ಕಿಂತ ಹೆಚ್ಚು ಮಂದಿ ಮೀರಬಾರದು. ಬಹಿರಂಗ ಸಭೆ, ರಾಜಕೀಯ ಸಭೆ ಸಮಾರಂಭಗಳಲ್ಲಿ 200 ಜನ ಮೀರಬಾರದು ಎಂದು ಸಮಿತಿ ಸೂಚನೆ ನೀಡಿದೆ. ಹೀಗಾಗಿ ಮತ್ತಷ್ಟು ಕಟ್ಟುನಿಟ್ಟಿನ ನಿಯಮ ಪಾಲನೆ ಜೊತೆಗೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಷೇನ್ ಕಡ್ಡಾಯವಾಗಿ ಪಾಲಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.