ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಕೊಡಗಿನ ಐವರು ನೇಮಕ

05/12/2020

ಮಡಿಕೇರಿ ಡಿ. 5 : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಸರಕಾರದ ಭಾಷಾ ನೀತಿ ಅನುಷ್ಠಾನದಲ್ಲಿ ಜನರು ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ಜಿಲ್ಲಾ ಮಟ್ಟದಲ್ಲಿ ರಚಿಸಿರುವ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಕೊಡಗಿನ ಐವರನ್ನು ನೇಮಕ ಮಾಡಲಾಗಿದೆ.
ಸಾಹಿತ್ಯ ಹಾಗೂ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಮಡಿಕೇರಿಯ ಭಾರತಿ ರಮೇಶ್, ಸೋಮವಾರಪೇಟೆಯ ಎಸ್. ಮಹೇಶ್, ಕಾಜೂರು ಸತೀಶ, ಕುಶಾಲನಗರದ ಇ. ರಾಜು, ವಿರಾಜಪೇಟೆಯ ರಂಜಿತ ಕಾರ್ಯಪ್ಪ ಅವರನ್ನು ನೇಮಕ ಮಾಡಲಾಗಿದೆ.