Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
3:28 AM Friday 22-October 2021

ಚುನಾವಣಾ ಆಯೋಗದ ನಿರ್ದೇಶನದಂತೆ ಕಾರ್ಯ ನಿರ್ವಹಿಸಿ: ವೀಕ್ಷಕ ವಿ.ಅನ್ಬುಕುಮಾರ್ ಸಲಹೆ

05/12/2020

ಮಡಿಕೇರಿ ಡಿ.05 :ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಮತದಾರರ ಪಟ್ಟಿ ವೀಕ್ಷಕರಾದ ವಿ.ಅನ್ಬುಕುಮಾರ್ ಅವರು ಸೂಚಿಸಿದ್ದಾರೆ.
ನಗರದ ಸಂತ ಜೋಸೆಫರ ಶಾಲೆಯ ಸಭಾಂಗಣದಲ್ಲಿ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ಶನಿವಾರ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲಾ ಚುನಾವಣಾಧಿಕಾರಿ ಅವರು ಚುನಾವಣಾ ಅಧಿಸೂಚನೆ ಹೊರಡಿಸಿದ ದಿನದಿಂದ ಚುನಾವಣಾ ಫಲಿತಾಂಶ ಪ್ರಕಟಿಸುವ ದಿನದವರೆಗೆ ಮತ್ತು ಚುನಾವಣೆ ಸಂಬಂಧ ಉಪಯೋಗಿಸಿದ ದಾಖಲೆಗಳು ಸುರಕ್ಷಿತವಾಗಿ ಇಡುವ ತನಕ, ಎಲ್ಲಾ ಕರ್ತವ್ಯವು ಆರ್‍ಒ ಮತ್ತು ಎಆರ್‍ಒಗಳ ಜವಾಬ್ದಾರಿಯಾಗಿದೆ. ಆದ್ದರಿಂದ ಶ್ರದ್ಧೆಯಿಂದ ಚುನಾವಣಾ ಆಯೋಗದ ನಿರ್ದೇಶನಗಳನ್ನು ಓದಿಕೊಂಡು ಕಾರ್ಯನಿರ್ವಹಿಸಬೇಕು ಎಂದು ವಿ.ಅನ್ಬುಕುಮಾರ್ ಅವರು ತಿಳಿಸಿದರು.
ಚುನಾವಣೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಕ್ಷತೆಯಿಂದ ಕೆಲಸ ನಿರ್ವಹಿಸಬೇಕು. ಯಾವ ಅಡ್ಡಿ ಆತಂಕಗಳು ಇಲ್ಲದೆ ಸುಗಮವಾಗಿ ಚುನಾವಣೆ ನಡೆಸಬೇಕು ಎಂದು ಅವರು ಹೇಳಿದರು.
ಚುನಾವಣೆಯು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಮಹತ್ವದ ಪ್ರಕ್ರಿಯೆಯಾಗಿದ್ದು, ಚುನಾವಣಾಧಿಕಾರಿಯಾಗಿ ನೇಮಕ ಮಾಡಿರುವ ರಿಟರ್ನಿಂಗ್ ಅಧಿಕಾರಿಗಳ ಕಾರ್ಯ ಅತ್ಯಂತ ಮಹತ್ವ ಹಾಗೂ ಜವಾಬ್ದಾರಿಯುತವಾಗಿದೆ ಎಂದು ಅನ್ಬುಕುಮಾರ್ ಅವರು ನುಡಿದರು.
ಮತದಾನ ಕೇಂದ್ರಗಳು, ನಾಮಪತ್ರ ಸ್ವೀಕೃತಿ, ಘೋಷಣಾ ಪತ್ರ, ನಾಮಪತ್ರ ಸೂಚನಾ ಪ್ರಕಟಣೆ, ನಾಮಪತ್ರಗಳ ಪರಿಶೀಲನೆ, ಚುನಾವಣಾ ಚಿಹ್ನೆಯ ಹಂಚಿಕೆ, ಮತಪತ್ರಗಳು, ಮತದಾನ, ಮತ ಎಣಿಕೆಗೆ ಸಿದ್ಧತೆ, ಮತ ಎಣಿಕೆಯ ವಿಧಾನ ಹೀಗೆ ಪ್ರತಿಯೊಂದರ ಬಗ್ಗೆ ಅಧ್ಯಯನ ಮಾಡಿಕೊಂಡು ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ವಿ.ಅನ್ಬುಕುಮಾರ್ ಅವರು ಸಲಹೆ ಮಾಡಿದರು.
ಮಡಿಕೇರಿ ತಾಲ್ಲೂಕು ನೋಡಲ್ ಅಧಿಕಾರಿ ನಿಲೇಶ್ ಸಿಂದೆ, ತಹಶೀಲ್ದಾರ್ ಮಹೇಶ್, ತರಬೇತಿದಾರರಾದ ಕೆ.ಜೆ.ದಿವಾಕರ, ಪ್ರಸಾದ್, ನೋಡಲ್ ಅಧಿಕಾರಿಗಳು, ಆರ್‍ಒ ಮತ್ತು ಎಆರ್‍ಒಗಳು ಇತರರು ಇದ್ದರು.