ಕೊಡಗು ಆದಿದ್ರಾವಿಡ ಸಂಘದಿಂದ ಡಾ.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ ಆಚರಣೆ

06/12/2020

ಮಡಿಕೇರಿ ಡಿ.6 : ಕೊಡಗು ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 64 ನೇ ಮಹಾ ಪರಿನಿರ್ವಾಣ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮಾದಾಪುರದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಹೆಚ್.ಎಂ.ಸೋಮಪ್ಪ ದೇಶದಲ್ಲಿ ಸಮಾನತೆಯನ್ನು ಮೂಡಿಸುವುದಕ್ಕಾಗಿ ಶೈಕ್ಷಣಿಕ ಸಾಧನೆಯ ಮೂಲಕ ಶ್ರಮಿಸಿದ ಡಾ.ಅಂಬೇಡ್ಕರ್ ಅವರ ಆದರ್ಶ ಎಲ್ಲರಿಗೂ ಮಾದರಿಯಾಗಿದೆ ಎಂದು ಶ್ಲಾಘಿಸಿದರು. ಪ್ರತಿಯೊಬ್ಬರು ಶಿಕ್ಷಣಕ್ಕೆ ಒತ್ತುವ ನೀಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಕರೆ ನೀಡಿದರು.
ಗೌರವಾಧ್ಯಕ್ಷ ಪಿ.ಬಿ.ಬಾಬು, ಉಪಾಧ್ಯಕ್ಷ ಪಿ.ಎಲ್.ಸುರೇಶ್, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಪಿ.ಟಿ.ರವಿ, ಕಾರ್ಯದರ್ಶಿ ಎಂ.ಎ.ಗಣೇಶ್ ಜಂಬೂರು, ಪ್ರಮುಖರಾದ ಹೆಚ್.ಎಂ.ಕೃಷ್ಣಪ್ಪ, ಬಿ.ಟಿ.ಸುಂದರ, ಮೋಹನ್ ನಂದಿಮೊಟ್ಟೆ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಇದೇ ಸಂದರ್ಭ ಆದಿದ್ರಾವಿಡ ಸಮಾಜದ ಸ್ವ-ಸಹಾಯ ಸಂಘಕ್ಕೆ ಚಾಲನೆ ನೀಡಲಾಯಿತು ಮತ್ತು ಸದಸ್ಯತ್ವವನ್ನು ಪಡೆಯಲಾಯಿತು.