ಸೋಮವಾರಪೇಟೆ ಬಿಜೆಪಿ ಶಕ್ತಿ ಕೇಂದ್ರದ ಸಭೆ

06/12/2020

ಸೋಮವಾರಪೇಟೆ ಡಿ.6 : ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರು, ಬೂತ್ ಸಮಿತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಚುನಾವಣಾ ಉಸ್ತುವಾರಿಗಳ ಸಭೆ ಇಲ್ಲಿನ ಕೊಡವ ಸಮಾಜದಲ್ಲಿ ನಡೆಯಿತು.
ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳ ಬಗ್ಗೆ ಪ್ರತಿಯೋರ್ವರಲ್ಲೂ ಜಾಗೃತಿ ಮೂಡಿಸುವ ಮೂಲಕ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುವಂತೆ ಕಾರ್ಯಕರ್ತರು ಕೆಲಸ ಮಾಡಬೇಕೆಂದರು.
ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆರಿಸಿ ಬಂದರೆ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಹೆಚ್ಚಿನ ಶ್ರಮವಹಿಸಬೇಕು ಎಂದು ರಂಜನ್ ಹೇಳಿದರು.
ಸಭೆಯಲ್ಲಿ ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ, ಮಂಡಲ ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ, ಮಾಜೀ ಅಧ್ಯಕ್ಷ ಕೊಮಾರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ಪಕ್ಷದ ಪ್ರಮುಖರಾದ ಬಿ.ಡಿ. ಮಂಜುನಾಥ್, ಉಷಾ ತೇಜಸ್ವಿ, ಭರತ್‍ಕುಮಾರ್, ಎಸ್.ಎ. ಪ್ರತಾಪ್ ಸೇರಿದಂತೆ ಇತರರು ಉಪಸ್ಥಿತರಿದ್ದರು.