ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 5413

07/12/2020

ಮಡಿಕೇರಿ ಡಿ. 7 : ಜಿಲ್ಲೆಯಲ್ಲಿ ಸೋಮವಾರ 7 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
7 ಪ್ರಕರಣಗಳು ಆರ್ಟಿ ಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 4, ಸೋಮವಾರಪೇಟೆ ತಾಲೂಕಿನಲ್ಲಿ 2 ಮತ್ತು ವಿರಾಜಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5413 ಆಗಿದ್ದು, 5252 ಮಂದಿ ಗುಣಮುಖರಾಗಿದ್ದಾರೆ. 88
ಸಕ್ರಿಯ ಪ್ರಕರಣಗಳಿದ್ದು, 73 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 65 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.