ಡಾ.ಅಂಬೇಡ್ಕರ್ ಹಾದಿಯಲ್ಲಿ ಸಾಗಲು ಕರೆ

December 7, 2020

ಬೆಂಗಳೂರು ಡಿ.7 : ಮಹಾನ್ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಪಾದಿಸಿರುವ ತತ್ವ ಆದರ್ಶಗಳನ್ನು ಅರ್ಥ ಮಾಡಿಕೊಂಡು ಅವರು ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ನಡೆಯುವಂತೆ ಸಂಕಲ್ಪ ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದ್ದಾರೆ.

ಸಂವಿಧಾನ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಸಮ ಸಮಾಜದ ನಿರ್ಮಾಣ ನಮ್ಮ ಸರ್ಕಾರದ ಗುರಿಯಾಗಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸರ್ಕಾರದ ಸೌಲಭ್ಯಗಳು ತಲುಪಬೇಕು. ಈ ನಿಟ್ಟಿನಲ್ಲಿ ನಾವು ಅಗತ್ಯವಿರುವ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದ್ದೇವೆ ಎಂದರು.

error: Content is protected !!