ಪೊಲೀಸರ ಮೇಲೆ ಗುಂಡಿನ ದಾಳಿ

07/12/2020

ಶ್ರೀನಗರ ಡಿ.7 : ಶ್ರೀನಗರದಲ್ಲಿ ಭಾನುವಾರ ಉಗ್ರರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ನಾಗರಿಕರೊಬ್ಬರು ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶ್ರೀನಗರದ ಹವಾಲಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಹವಾಲಾ ಚೌಕಾದಲ್ಲಿ ಪೊಲೀಸರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಗಾಯಗೊಂಡಿರುವ ಪೊಲೀಸ್ ಹಾಗೂ ನಾಗರಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಭಯೋತ್ಪಾದಕರ ಪತ್ತೆಗಾಗಿ ಈ ಪ್ರದೇಶವನ್ನು ಪೊಲೀಸರು ಸುತ್ತುವರಿದಿರುವುದಾಗಿ ಅವರು ತಿಳಿಸಿದ್ದಾರೆ.