ಕೊಡಗಿನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಬಿ.ಆರ್. ರೂಪ ಅಧಿಕಾರ ಸ್ವೀಕಾರ

07/12/2020

ಮಡಿಕೇರಿ ಡಿ. 7 : ಕೊಡಗು ಜಿಲ್ಲೆಗೆ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಬಿ.ಆರ್. ರೂಪ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ(ಪ್ರಭಾರ) ಕಾರ್ಯ ನಿರ್ವಹಿಸುತ್ತಿದ್ದ ಪಿ.ಶ್ರೀನಿವಾಸ ಅವರಿಂದ ಅಧಿಕಾರ ಸ್ವೀಕರಿಸಿದರು.

ಬಿ.ಆರ್.ರೂಪ ಅವರು ಈ ಹಿಂದೆ ಮೈಸೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಮುಖ್ಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.