ಕುಶಾಲನಗರದಲ್ಲಿ ಡಾ.ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

08/12/2020

ಮಡಿಕೇರಿ ಡಿ. 8 : ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಕುಶಾಲನಗರದ ಟೌನ್ ಕಾಲೋನಿಯ ಅಂಬೇಡ್ಕರ್ ಭವನದಲ್ಲಿ ಭಾರತರತ್ನ ಡಾ.ಬಿ.ಆರ್. ಭೀಮರಾವ್ ಅಂಬೇಡ್ಕರ್ ರವರ 64ನೇ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು.
ಈ ಸಂದರ್ಭ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಕೆ.ಬಿ. ರಾಜು, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಕೀರ್ತಿರಾಜ್, ದಲಿತ ಸಂಘರ್ಷ ಸಮಿತಿ ತಾಲ್ಲೂಕು ಉಪಾಧ್ಯಕ್ಷ ಮಹಾದೇವ್, ದಲಿತ ಸಂಘರ್ಷ ಸಮಿತಿಯ ಹೋಬಳಿ ಸಂಘಟನಾ ಸಂಚಾಲಕ ಪೃಥ್ವಿರಾಜ್ ಮತ್ತಿತರರು ಹಾಜರಿದ್ದರು.