ಕೊಡಗಿನಲ್ಲಿ ಕೋವಿಡ್ : ಪ್ರಕರಣಗಳ ಸಂಖ್ಯೆ 5419

08/12/2020

ಮಡಿಕೇರಿ ಡಿ. 8 : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆ ವೇಳೆಗೆ 6 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 5 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ ಈ ಪೈಕಿ 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5419 ಆಗಿದ್ದು, 5262 ಮಂದಿ ಗುಣಮುಖರಾಗಿದ್ದಾರೆ. 84
ಸಕ್ರಿಯ ಪ್ರಕರಣಗಳಿದ್ದು, 73 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 64 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.