ಲಾಠಿಚಾರ್ಜ್‍ನಿಂದ ಬಿಜೆಪಿ ಕಾರ್ಯಕರ್ತ ಸಾವು

08/12/2020

ಕೋಲ್ಕತಾ ಡಿ.8 : ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ಹಿಂಸಾಚಾರಕ್ಕೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೆÇಲೀಸರು ನಡೆಸಿದ ಲಾಠಿ ಚಾರ್ಜ್ ನಿಂದಾಗಿ ಬಿಜೆಪಿ ಪಕ್ಷದ ಓರ್ವ ಕಾರ್ಯಕರ್ತ ಮೃತಪಟ್ಟಿದ್ದಾರೆ.
ರಾಜ್ಯ ಸರ್ಕಾರದ ದುರಾಡಳಿತ ವಿರೋಧಿ ಬಿಜೆಪಿ ಯುವ ಮೋರ್ಚಾ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದು, ಇಂದು ಸಿಲಿಗುರಿಯ ಮಿನಿ ಸಚಿವಾಲಯ ಕಟ್ಟಡಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೆÇಲೀಸರು ಲಾಠಿ ಚಾರ್ಜ್ ನಡೆಸಿದ್ದು, ಘಟನೆ ಪುಲಿನ್ ರಾಯ್ ಎಂಬ ಕಾರ್ಯಕರ್ತ ಮೃತಪಟ್ಟಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಪ್ರತಿಭಟನಾ ನಿರತ ಪಕ್ಷದ ಕಾರ್ಯಕರ್ತರ ಮೇಲೆ ಪೆÇಲೀಸರು ನಿರ್ದಯವಾಗಿ ಲಾಠಿ ಚಾರ್ಜ್ ಮಾಡಿದ್ದಾರೆ. ಪ್ರತಿಭಟನಾ ಮೆರವಣಿಗೆಯನ್ನು ನಮ್ಮ ಪಕ್ಷದ ಯುವ ಮೋರ್ಚಾ ಆಯೋಜಿಸಿತ್ತು. ಯುವ ಮೋರ್ಚಾದ ಕಾರ್ಮಿಕರು ಆಡಳಿತ ಕಟ್ಟಡದತ್ತ ಸಾಗುತ್ತಿದ್ದ ವೇಳೆ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಅವರು ಹೇಳಿದ್ದಾರೆ.