ವಿಜಯಶಾಂತಿ ಬಿಜೆಪಿಗೆ ಮರು ಸೇರ್ಪಡೆ

08/12/2020

ನವದೆಹಲಿ ಡಿ.8 : ತೆಲುಗು ಚಿತ್ರರಂಗದ ನಟಿ – ಲೇಡಿ ಅಮಿತಾಭ್ ಎಂದೇ ಗುರುತಿಸಿಕೊಂಡ ರಾಜಕಾರಣಿ ವಿಜಯಶಾಂತಿ ಅವರು ಸೋಮವಾರ ದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಮರು ಸೇರ್ಪಡೆಗೊಂಡಿದ್ದಾರೆ.
ತೆಲಂಗಾಣ ಬಿಜೆಪಿ ಅಧ್ಯಕ್ಷ ಸಂಜಯ್ ಕುಮಾರ್ ಮತ್ತು ಇತರೆ ನಾಯಕರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ವಿಜಯಶಾಂತಿ ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡ ಭೇಟಿ ಮಾಡಿ ಮಾತುಕತೆ ಮಾಡಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ.
ವಿಜಯಶಾಂತಿ, 1997ರಲ್ಲಿ ಬಿಜೆಪಿ ಸೇರಿ ನಂತರ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿಯಾಗಿದ್ದರು.