ಸೋಮವಾರಪೇಟೆಯಲ್ಲಿ ಬಿಜೆಪಿ ಎಸ್.ಸಿ. ಮೋರ್ಚಾದಿಂದ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ

December 8, 2020

ಸೋಮವಾರಪೇಟೆ,ಡಿ.8: ಬಿಜೆಪಿ ಎಸ್.ಸಿ. ಮೋರ್ಚಾದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು.
ಪಕ್ಷದ ಮುಖಂಡರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಎಸ್.ಎ. ಪ್ರತಾಪ್, ತಾಲೂಕು ಅಧ್ಯಕ್ಷ ರಾಮಕೃಷ್ಣ, ಪ.ಪಂ. ಅಧ್ಯಕ್ಷೆ ನಳಿನಿ ಗಣೇಶ್, ಸದಸ್ಯರಾದ ಬಿ.ಆರ್. ಮಹೇಶ್, ಬಿಜೆಪಿ ನಗರಾಧ್ಯಕ್ಷ ಸೋಮೇಶ್, ಪ್ರಮುಖರಾದ ರವಿಚಂದ್ರ, ಶೋಭಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

error: Content is protected !!