ರೈತರ ವಿರೋಧದ ನಡುವೆಯೂ ಮಸೂದೆ ಅಂಗೀಕಾರ

09/12/2020

ಬೆಂಗಳೂರು ಡಿ.9 : ರೈತ ಸಂಘಟನೆಗಳ ಪ್ರತಿಭಟನೆ ಹಾಗೂ ಕಾಂಗ್ರೆಸ್‍ನ ತೀವ್ರ ವಿರೋಧದ ನಡುವೆಯೂ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಮಸೂದೆಯನ್ನು ವಿಧಾನಪರಿಷತ್‍ನಲ್ಲಿ ಅಂಗೀಕರಿಸಲಾಯಿತು.
ಹಿಂದಿನ ಅಧಿವೇಶನದಲ್ಲಿ ಭೂ ಸುಧಾರಣಾ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್ ಒಪ್ಪಿಗೆ ದೊರಕಿರಲಿಲ್ಲ. ಹೀಗಾಗಿ ಸೋಮವಾರ ಆರಂಭವಾದ ಅಧಿವೇಶನದಲ್ಲಿ ಕಂದಾಯ ಸಚಿವ ಆರ್. ಅಶೋಕ ಅವರು ಮತ್ತೆ ಪರಿಷ್ಕøತ ಮಸೂದೆ ಮಂಡಿಸಿದ್ದರು.