ಬೆಕ್ಕೇಸೊಡ್ಲುರು ಗ್ರಾಮದಲ್ಲಿ ಹುಲಿದಾಳಿಗೆ ಹಸು ಬಲಿ

December 9, 2020

ಮಡಿಕೇರಿ ಡಿ.9 : ಹುಲಿ ದಾಳಿಗೆ ಹಸು ಬಲಿಯಾದ ಘಟನೆ ಪೊನ್ನಂಪೇಟೆ ಸಮೀಪದ ಬೆಕ್ಕೇಸೊಡ್ಲುರು ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಸುಳ್ಳಿಮಾಡ ಬಜನ್ ದೇವಯ್ಯ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಘಟನೆ ಕುರಿತು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ತಕ್ಷಣ ಹುಲಿ ಸೆರೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಗ್ರಾಮದಲ್ಲಿ ಆತಂಕದ ವಾತಾವರಣ ಮುಂದುವರೆದಿದೆ.

error: Content is protected !!