ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಉಪಹಾರ ಪುನರಾರಂಭ : ಆಹಾರ ಧಾನ್ಯ ಗೋದಾಮಿಗೆ ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ

09/12/2020

ಮಡಿಕೇರಿ ಡಿ 9 : ಕೊಡಗು ಜಿಲ್ಲೆಯಲ್ಲಿ ಅಕ್ಷರ ದಾಸೋಹ (ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಉಪಹಾರ) ಯೋಜನೆಯಡಿ ಸರ್ಕಾರಿ/ಅನುದಾನಿತ ಶಾಲೆಗಳ 1ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯ ಹಂಚಿಕೆ ಮಾಡುವ ಕಾರ್ಯ ಪುನರಾರಂಭಗೊಂಡಿದೆ.

ಸರ್ಕಾರದ ಹೊಸ ಆದೇಶದಂತೆ ಆಹಾರ ಧಾನ್ಯಗಳನ್ನು ಜುಲೈ ಮಾಹೆಯವರೆಗೆ ವಿತರಿಸಲಾಗುವುದು. ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಹಂಚಿಕೆ ಕಾರ್ಯದ ಮೇಲುಸ್ತುವಾರಿಯನ್ನು ವಹಿಸಲಾಗಿದೆ. ಜಿಲ್ಲಾಧಿಕಾರಿಗಳು ಆಹಾರ ಧಾನ್ಯ ಸಂಗ್ರಹಿಸಲ್ಪಟ್ಟ ಗೋದಾಮಿಗೆ ಭೇಟಿ ನೀಡಿ ಆಹಾರ ಧಾನ್ಯಗಳ ಗುಣಮಟ್ಟವನ್ನು ಪರಿಶೀಲಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಚ್ಚಡೋ ಮತ್ತು ಆಹಾರ ಇಲಾಖೆಯ ಉಪನಿರ್ದೇಶಕರಾದ ಗೌರವ್ ಶಿಕ್ಷಣಾಧಿಕಾರಿ ಕೃಷ್ಣಪ್ಪ ರವರು ಹಾಜರಿದ್ದರು.