ಡಿ. 16 ರಂದು ಪೊನ್ನಂಪೇಟೆಯಲ್ಲಿ ರಕ್ತದಾನ ಶಿಬಿರ

09/12/2020

ಮಡಿಕೇರಿ ಡಿ. 9 : ಪೊನ್ನಂಪೇಟೆಯ ಸ್ವಾಮಿ ವಿವೇಕಾನಂದ ಯೂತ್ ಮೂಮ್‍ಮೆಂಟ್ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಡಿ. 16 ರಂದು ರಕ್ತದಾನ ಶಿಬಿರ ನಡೆಯಲಿದೆ.
ರಕ್ತನಿಧಿ ಕೇಂದ್ರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಡಗು ಪತ್ರಿಕಾ ಭವನ ಟ್ರಸ್ಟ್ ಮಡಿಕೇರಿ, ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ, ಪೊನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮ ಹಾಗೂ ಗೋಣಿಕೊಪ್ಪ ರೋಟರಿ ಕ್ಲಬ್, ಗೋಣಿಕೊಪ್ಪ ವಾಹನ ಚಾಲಕರ ಸಂಘ ಮತ್ತು ಗೋಣಿಕೊಪ್ಪ ಆಟೋ ಚಾಲಕರ ಸಂಘದ ಸಹಯೋಗದಲ್ಲಿ ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಶಿಬಿರ ನಡೆಯಲಿದೆ.
ರಕ್ತದಾನ ಮಾಡಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ ಅನಂತ- 9480629342, ಅಂಕಾಚಾರಿ-9964103322, ವೆಂಕಟಸ್ವಾಮಿ-9686666350 ಸಂಪರ್ಕಿಸಬಹುದಾಗಿದೆ.