Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
10:48 PM Tuesday 26-October 2021

ಗ್ರಾ.ಪಂ.ಚುನಾವಣೆ : ಮದ್ಯ ಮಾರಾಟ ನಿಷೇಧ

10/12/2020

ಮಡಿಕೇರಿ ಡಿ. 10 : ಗ್ರಾಮ ಪಂಚಾಯತ್ ಚುನಾವಣೆ 2020ರ ಮತದಾನವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ 10 ಬಿ ಮತ್ತು ಅಬಕಾರಿ ಕಾಯ್ದೆ 1965ರ ಕಲಂ 21 ರ ಅಡಿಯಲ್ಲಿ ಪ್ರತ್ಯಾಯೋಜಿತವಾಗಿರುವ ಅಧಿಕಾರದಂತೆ ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಡಿಸೆಂಬರ್, 20 ರ ಸಂಜೆ 5 ಗಂಟೆಯಿಂದ ಡಿಸೆಂಬರ್, 22 ರ ಸಂಜೆ 5 ಗಂಟೆಯವರೆಗೆ ಹಾಗೂ ವಿರಾಜಪೇಟೆ ತಾಲ್ಲೂಕಿನಲ್ಲಿ ನೀತಿಸಂಹಿತೆ ಜಾರಿಯಲ್ಲಿರುವ ಗ್ರಾಮ ಪಂಚಾಯತ್‍ಗಳ ವಾಪ್ತಿಯಲ್ಲಿ ಡಿಸೆಂಬರ್, 25 ರ ಸಂಜೆ 5 ಗಂಟೆಯಿಂದ ಡಿಸೆಂಬರ್, 27 ರ ಸಂಜೆ 5 ಗಂಟೆಯವರೆಗೆ ಎಲ್ಲಾ ವಿಧದ ಮದ್ಯ ತಯಾರಿಕೆ, ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸೂಚನೆಗಳಿಗೆ ಒಳಪಟ್ಟು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.
ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ನೀತಿ ಸಂಹಿತೆಯು ಜಾರಿಯಲ್ಲಿರುವ ಪ್ರದೇಶಗಳಲ್ಲಿರುವ ಎಲ್ಲಾ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅದಿಭೋಗದಾರರು ಮತ್ತು ಸಂದರ್ಭಾನುಸಾರ ಮುಚ್ಚತಕ್ಕದ್ದು ಹಾಗೂ ಮೊಹರು ಮಾಡಿ ಕೀಯನ್ನು ಜಿಲ್ಲಾಧಿಕಾರಿಗಳಿಗೆ ಅಥವಾ ಅಧಿಕಾರ ವ್ಯಾಪ್ತಿಯುಳ್ಳ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರಿಗೆ ಒಪ್ಪಿಸತಕ್ಕದ್ದು.
ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಯಾರಾದರೂ ಮದ್ಯವನ್ನು ಸ್ವಾಧೀನದಲ್ಲಿಟ್ಟುಕೊಂಡಿರುವುದು ಅಥವಾ ಮದ್ಯವನ್ನು ಸೇವಿಸಿ ಬೀದಿಯಲ್ಲಿ ರಂಪಾಟ ಮಾಡುತ್ತಿರುವುದು ಕಂಡು ಬಂದರೆ ಮುನ್ನೆಚ್ಚರಿಕಾ ಕ್ರಮವಾಗಿ ಚುನಾವಣೆ ಮುಕ್ತಾಯವಾಗುವವರೆಗೆ ಅಂತಹವರನ್ನು ಕಸ್ಟಡಿಯಲ್ಲಿ ಇಡಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.