ಗ್ರಾ.ಪಂ. ಚುನಾವಣೆ ಹಿನ್ನೆಲೆ ಸಂತೆ, ಜಾತ್ರೆ ನಿಷೇಧ

December 10, 2020

ಮಡಿಕೇರಿ ಡಿ. 10 : ಗ್ರಾಮ ಪಂಚಾಯತ್ ಚುನಾವಣೆ 2020ರ ಮತದಾನವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 36 ಮತ್ತು ದಂಡ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 144 ಅಡಿಯಲ್ಲಿ ದತ್ತವಾಗಿರುವ ಅಧಿಕಾರದಂತೆ ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಡಿಸೆಂಬರ್, 21 ರ ಮಧ್ಯರಾತ್ರಿ 12 ಗಂಟೆಯಿಂದ ಡಿಸೆಂಬರ್, 22 ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ವಿರಾಜಪೇಟೆ ತಾಲ್ಲೂಕಿನಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಡಿಸೆಂಬರ್, 26 ರ ಮಧ್ಯರಾತ್ರಿ 12 ಗಂಟೆಯಿಂದ ಡಿಸೆಂಬರ್, 27 ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ವಿಧದ ಸಂತೆ ಜಾತ್ರೆಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.

error: Content is protected !!