ಹೆಚ್‍ಡಿಕೆ ವಿರುದ್ಧ ಕೋಡಿಹಳ್ಳಿ ವಾಗ್ಧಾಳಿ

December 10, 2020

ಬೆಂಗಳೂರು ಡಿ.10 : ಜೆಡಿಎಸ್ ಮಣ್ಣಿನ ಮಕ್ಕಳ ಪಕ್ಷವಲ್ಲ. ಅದು ರೈತರ ಹೆಸರಿನಲ್ಲಿ ಮಣ್ಣಿನ ಮಕ್ಕಳಿಗೆ ಮೋಸ ಮಾಡುವ ಪಕ್ಷ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಪರಿಷತ್ನಲ್ಲಿ ಜೆಡಿಎಸ್ ಬೆಂಬಲಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ನವರು ರೈತರ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ನಿನ್ನೆ ಬೆಳಗ್ಗೆ ಹೇಳಿತ್ತು. ಆದರೆ ಸಂಜೆ ವೇಳೆ ಉಲ್ಟಾ ಹೊಡೆದು ಯಡಿಯೂರಪ್ಪನರಿಗೆ ಬೆಂಬಲ ಕೋಡುತ್ತಾರೆ ಎಂದರೆ ಏನು ಅರ್ಥ ಎಂದು ಪ್ರಶ್ನಿಸಿ ಕಿಡಿಕಾರಿದ್ದಾರೆ.

error: Content is protected !!