ಕೊಡಗಿನ ಖಾಸಗಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯಿಂದ ಗ್ರಾ.ಪಂ ಚುನಾವಣೆ ಬಹಿಷ್ಕಾರಕ್ಕೆ ಚಿಂತನೆ

December 10, 2020

ಮಡಿಕೇರಿ ಡಿ. 10 : ಕುಶಾಲನಗರದ ಉದ್ಗಮ್ ಶಾಲೆಯಲ್ಲಿ ಖಾಸಗಿ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಸಭೆಯಲ್ಲಿ ಗ್ರಾ.ಪಂ ಚುನಾವಣೆ ಬಹಿಷ್ಕಾರಕ್ಕೆ ಚಿಂತನೆ ಮಾಡಲಾಗಿದೆ.

ಒಕ್ಕೂಟದ ಜಿಲ್ಲಾಧ್ಯಕ್ಷ ಝರು ಗಣಪತಿ ಅವರ ಮುಂದಾಳತ್ವದಲ್ಲಿ ನಡೆದ ಸಭೆಯಲ್ಲಿ ಖಾಸಗಿ ಶಾಲೆಗಳು ಹಾಗೂ ಖಾಸಗಿ ಶಿಕ್ಷಕರನ್ನು ಸರ್ಕಾರ ನಿರ್ಲಕ್ಷಿಸುವ ಮೂಲಕ ಸಂಕಷ್ಟದ ಪರಿಸ್ಥಿತಿಗೆ ತಳ್ಳಿರುವುದರಿಂದ ಗ್ರಾ.ಪಂ ಚುನಾವಣೆಯನ್ನು ಬಹಿಷ್ಕರಿಸಲು ಆಡಳಿತ ಮಂಡಳಿ ಹಾಗೂ ಶಿಕ್ಷಕರಿಂದ ಚಿಂತನೆ ನಡೆಸಲಾಗಿದ್ದು, ಇದರ ಬಗ್ಗೆ ರಾಜ್ಯ ಸಂಘಟನೆಯ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲು ಸರ್ವ ಸದಸ್ಯರು ಒಪ್ಪಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ಕೋಟ್ರಂಗಡ, ಉಪಾಧ್ಯಕ್ಷ ದಾಮೋದರ್, ಪದಾಧಿಕಾರಿಗಳಾದ ಎಂ.ಎಸ್.ಪೂವಯ್ಯ, ಬಿ.ಪಿ.ಬೋಪಣ್ಣ, ಮಣಿ ಮೊಹಮದ್, ಸಚಿನ್ ವಾಸುದೇವ್, ಡಿ.ಎನ್. ವಿಜು, ಉಮಾ ಪ್ರಭಾಕರ್, ಮೋಹನ್ ಹಾಗೂ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಯ ಆಡಳಿತ ಮಂಡಳಿ ಮತ್ತು ಶಿಕ್ಷಕರು ಇದ್ದರು.

error: Content is protected !!