ರಾಜ್ಯ ಪಶ್ಚಿಮಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷರಾಗಿ ಶಾಂತೆಯಂಡ ರವಿಕುಶಾಲಪ್ಪ ಅಧಿಕಾರ ಸ್ವೀಕಾರ

December 10, 2020

ಮಡಿಕೇರಿ ಡಿ.10 : ಕರ್ನಾಟಕ ರಾಜ್ಯ ಪಶ್ಚಿಮಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷರಾಗಿ ಶಾಂತೆಯಂಡ ರವಿಕುಶಾಲಪ್ಪ ಅವರು ಇಂದು ಅಧಿಕಾರ ಸ್ವೀಕರಿಸಿದರು.
ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ಸಂದರ್ಭ ಶಾಸಕ ಕೆ.ಜಿ.ಬೋಪಯ್ಯ ಹಾಜರಿದ್ದರು.
ಶುಕ್ರವಾರ ಕೊಡಗು ಜಿಲ್ಲೆಗೆ ಆಗಮಿಸಲಿರುವ ರವಿಕುಶಾಲಪ್ಪ ಅವರನ್ನು ಕುಶಾಲನಗರ ಕೊಪ್ಪ ಗೇಟ್ ಬಳಿ ಆತ್ಮೀಯವಾಗಿ ಸ್ವಾಗತಿಸಲಾಗುವುದೆಂದು ಕೊಡಗು ಜಿಲ್ಲಾ ಬಿಜೆಪಿ ತಿಳಿಸಿದೆ.

error: Content is protected !!