ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್‍ಗೆ ಸೇರ್ಪಡೆ

10/12/2020

ಮಡಿಕೇರಿ ಡಿ. 10 : ಎಮ್ಮೆಮಾಡು ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಹಾಗೂ ಮೂರ್ನಾಡಿನ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ರಾಜ್ಯ ಸಂಘಟನಾ ಕಾರ್ಯದರ್ಶಿ ನಾಪೋಕ್ಲುವಿನ ಮನ್ಸೂರ್ ಆಲಿ ಅವರ ಶಿಫಾರಸ್ಸಿನ ಮೇರೆಗೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಎಮ್ಮೆಮಾಡು ಗ್ರಾ.ಪಂ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರಾದ ಅಫ್ಸತ್, ಅಸೈನರ್ ಕನ್ನಡಿಯಂಡ, ಸಿ.ವೈ. ಐಸಮ್ಮ, ಮಜಿದ್, ಮಮ್ಮು ಮಾಸ್ಟರ್, ಹಸೈನರ್, ಹಂಸ ಮುಸ್ಲಿಯರ್, ಮಹಮ್ಮದ್ ಶಾಹಿದ್, ದುಬೈದ ಹಾಗೂ ಮೂರ್ನಾಡಿನ ಫ್ರೆಂಡ್ಸ್ ವಾಹನ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ಅಬೂಬಕ್ಕರ್ ಅವರನ್ನು ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಜೆಡಿಎಸ್ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.
ಈ ಸಂದರ್ಭ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಜಾಶಿರ್, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಲೀಲಾ ಶೇಷಮ್ಮ, ಮಹಿಳಾ ಘಟಕದ ನಗರಾಧ್ಯಕ್ಷೆ ಸುನಂದ ಹಾಗೂ ಮತ್ತಿತರ ಕಾರ್ಯಕರ್ತರು ಇದ್ದರು.