ಕಿರುಸಾಲ ಯೋಜನೆಯಡಿ ಸ್ತ್ರೀಶಕ್ತಿ ಗುಂಪುಗಳಿಂದ ಅರ್ಜಿ ಆಹ್ವಾನ

December 10, 2020

ಮಡಿಕೇರಿ ಡಿ.10 : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, 2020-21 ನೇ ಸಾಲಿನಲ್ಲಿ ಕಿರುಸಾಲ ಯೋಜನೆಯಡಿ ಜಿಲ್ಲೆಗೆ 4 ಗುರಿಗಳನ್ನು ನಿಗದಿಪಡಿಸಲಾಗಿದ್ದು ಅರ್ಹ ಸ್ತ್ರೀಶಕ್ತಿ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ(2020-21) ಸಾಲಿನಲ್ಲಿ ಕಿರುಸಾಲ ಯೋಜನೆಯಡಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಕೊಡಗು ಜಿಲ್ಲೆಗೆ ಪ.ಜಾತಿ -1, ಪ.ಪಂ-2, ಇತರೆ-1 ಒಟ್ಟು 4 ಗುರಿ ನಿಗದಿಪಡಿಸಲಾಗಿದೆ. ಸ್ತ್ರೀಶಕ್ತಿ ಸ್ವ-ಸಹಾಯ ಗುಂಪಿನ ಸದಸ್ಯರುಗಳಿಗೆ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ.ಜಾ.ಮತ್ತು ಪ.ಪಂ. ಗುಂಪಿಗೆ ರೂ.3 ಲಕ್ಷ, ಇತರೆ ಗುಂಪಿಗೆ ರೂ.2 ಲಕ್ಷಗಳ ವರೆಗೆ ಬಡ್ಡಿ ರಹಿತ ಸಾಲವನ್ನಾಗಿ ನೀಡಲಾಗುವುದು.
ಕಿರುಸಾಲ ಪಡೆಯುವ ಸ್ತ್ರೀಶಕ್ತಿ ಗುಂಪಿಗೆ ಇರುವ ಅರ್ಹತೆಗಳು:- ಬ್ಯಾಂಕ್ ಖಾತೆ ಹೊಂದಿದ್ದು ಚಾಲ್ತಿಯಲ್ಲಿರಬೇಕು. ಗುಂಪಿನ ಸದಸ್ಯರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಗುಂಪು ಬೇರೆ ಯಾವುದೇ ಆರ್ಥಿಕ ಸಂಸ್ಥೆ/ ಬ್ಯಾಂಕ್‍ಗಳಲ್ಲಿ ಸಾಲಗಾರರಾಗಿರಬಾರದು. ಈಗಾಗಲೇ ಕಿರುಸಾಲ ಯೋಜನೆಯಡಿ ಪ್ರಯೋಜನ ಪಡೆಯದೇ ಇರುವ ಸಂಘಗಳು ಮಾತ್ರ ಅರ್ಹರಾಗಿರುತ್ತಾರೆ. ಗುಂಪು ಅರ್ಥಿಕವಾಗಿ ಸದೃಢವಾಗಿದ್ದು, ಗುಂಪಿನ ಉಳಿತಾಯ ಗರಿಷ್ಟ 2 ಲಕ್ಷಗಳಿಗೆ ಮೇಲ್ಪಟ್ಟಿರಬೇಕು. ಗುಂಪು ಒಂದು ಯೋಜನಾ ಘಟಕವನ್ನು ಸ್ಥಾಪಿಸಲು ಯೋಜನಾ ವರದಿ ಹೊಂದಿರಬೇಕು. ತಾಲೂಕು ಮಟ್ಟದ ಸ್ತ್ರೀಶಕ್ತಿ ಒಕ್ಕೂಟದಲ್ಲಿ ನೋಂದಾವಣೆಯಾಗಿದ್ದು ರೂ.250 ಶುಲ್ಕ ಪಾವತಿಸಿ ಸದಸ್ಯತ್ವ ಹೊಂದಿರಬೇಕು. ಸದಸ್ಯರೆಲ್ಲರೂ ರೂ.50 ಛಾಪಾ ಕಾಗದದಲ್ಲಿ ಕರಾರು ಪತ್ರ, ಸ್ತ್ರೀಶಕ್ತಿ ಗುಂಪು ಗ್ರೇಡೀಂಗ್‍ಗೆ ಒಳಪಟ್ಟಿರಬೇಕು.
ಅರ್ಹ ಸ್ತ್ರೀಶಕ್ತಿ ಗುಂಪಿನ ಸದಸ್ಯರು ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ, ಜಿಲ್ಲಾ ವ್ಯವಸ್ಥಾಪಕರ ಕಚೇರಿ/ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ ಗೇಟ್, ಮೈಸೂರು ರಸ್ತೆ, ಮಡಿಕೇರಿ. ದೂರವಾಣಿ ಸಂಖ್ಯೆ 7996368687. ಮಡಿಕೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ ಗೇಟ್, ಮೈಸೂರು ರಸ್ತೆ, ಮಡಿಕೇರಿ, ದೂರವಾಣಿ ಸಂಖ್ಯೆ-08272-228197, ಸೋಮವಾರಪೇಟೆ ತಾಲೂಕು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಸ್ತ್ರೀಶಕ್ತ್ತಿ ಭವನ, ತಾಲೂಕು ಪಂಚಾಯತ್ ಆವರಣ, ಸೋಮವಾರಪೇಟೆ, ದೂರವಾಣಿ ಸಂಖ್ಯೆ: 08276-282281. ವಿರಾಜಪೇಟೆ ತಾಲೂಕು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಜಿಲ್ಲಾ ಸ್ತ್ರೀಶಕ್ತಿ ಮಾರುಕಟ್ಟೆ ಸಂಕೀರ್ಣ ಕಟ್ಟಡ ಉಪ ನೋಂದಾವಣಾಧಿಕಾರಿಗಳ ಕಚೇರಿ ಎದುರು ಪೊನ್ನಂಪೇಟೆ ದೂರವಾಣಿ ಸಂಖ್ಯೆ 08274-249010 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

error: Content is protected !!