ಡಿ.12 ರಂದು ಹೆಬ್ಬಾಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

December 10, 2020

ಮಡಿಕೇರಿ ಡಿ.10 : ಕುಶಾಲನಗರ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಹೆಬ್ಬಾಲೆ ಫೀಡರ್‍ಗಳಲ್ಲಿ ತುರ್ತು ನಿರ್ವಹಣೆ ಹಾಗೂ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಡಿಸೆಂಬರ್, 12 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಹೆಬ್ಬಾಲೆ, ಹುಲುಸೆ, ಮರೂರು ಶಿರಂಗಾಲ, ತೊರೆನೂರು, 6ನೇ ಹೊಸಕೋಟೆ, ಚಿಕ್ಕನಾಯಕನ ಹೊಸಳ್ಳಿ ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

error: Content is protected !!