ಡಿ.11 ರಂದು ಅಂಚೆ ಅದಾಲತ್ ಸಭೆ

December 10, 2020

ಮಡಿಕೇರಿ ಡಿ.10 : ಅಂಚೆ ಅದಾಲತ್‍ನ ಮುಂದಿನ ಸಭೆಯು ಡಿಸೆಂಬರ್, 11 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿಯಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದಂತೆ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ ಎಂದು ಕೊಡಗು ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

error: Content is protected !!