ನೂತನ ಸಂಸತ್ ಭವನಕ್ಕೆ ಶಿಲಾನ್ಯಾಸ

December 11, 2020

ನವದೆಹಲಿ ಡಿ.11 : ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಗುರುವಾರ ನೂತನ ಸಂಸತ್ ಭವನಕ್ಕೆ ಶಿಲಾನ್ಯಾಸ ಪೂಜೆ ನೆರವೇರಿಸಿದರು. ಹಲವು ರಾಜಕೀಯ ಪಕ್ಷಗಳ ನಾಯಕರು, ಸಂಪುಟ ಸಚಿವರು, ವಿವಿಧ ದೇಶಗಳ ರಾಯಭಾರಿಗಳು, ಧಾರ್ಮಿಕ ಮುಖಂಡರು ತುಂಬಿದ್ದ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನೂತನ ಸಂಸತ್ತು ಭವನಕ್ಕೆ ಶಂಕುಸ್ಥಾಪನೆ ಮತ್ತು ಭೂಮಿ ಪೂಜೆಯನ್ನು ನೆರವೇರಿಸಿದರು.
ದೆಹಲಿಯ ಸಂಸತ್ತು ಭವನ ಆವರಣದಲ್ಲಿಯೇ ನೂತನ ಸಂಸತ್ತು ಭವನ ತಲೆಯೆತ್ತಲಿದ್ದು, 2022ರ ವೇಳೆಗೆ ನಿರ್ಮಾಣ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
ಕರ್ನಾಟಕದ ಶೃಂಗೇರಿ ಮಠದ ಅರ್ಚಕರ ನೇತೃತ್ವದಲ್ಲಿ ಭೂಮಿ ಪೂಜೆ ನೆರವೇರಿತು. ನಂತರ ಅಂತರ ಧರ್ಮ ಪ್ರಾರ್ಥನೆಯ ಧ್ಯೋತಕವಾಗಿ ಸರ್ವಧರ್ಮ ಪ್ರಾರ್ಥನೆ ನೆರವೇರಿತು.
ಲೋಕಸಭಾಧ್ಯಕ್ಷ ಓಂ ಬಿರ್ಲಾ, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ, ರಾಜ್ಯಸಭೆ ಉಪಾಧ್ಯಕ್ಷ ಪರಿವಂಶ್ ಕಾರ್ಯಕ್ರಮದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಹ ಉಪಸ್ಥಿತರಿದ್ದರು.

error: Content is protected !!