ಕಸ್ತೂರಿ ರಂಗನ್ ವರದಿ ಭಯ ಬೇಡ

12/12/2020

ಬೆಂಗಳೂರು ಡಿ.12 : ಡಾ.ಕೆ.ಕಸ್ತೂರಿ ರಂಗನ್ ವರದಿಯನ್ವಯ ರಾಜ್ಯದಲ್ಲಿನ ಪಶ್ಚಿಮಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೊಳಪಡುತ್ತಿರುವ 1533 ಗ್ರಾಮಗಳ ಜನರ ಹಿತಾಸಕ್ತಿ ಕಾಪಾಡಲು ಸರಕಾರ ಬದ್ಧವಾಗಿದ್ದು, ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.
ಗುರುವಾರ ವಿಧಾನಸಭೆಯ ಶೂನ್ಯವೇಳೆಯಲ್ಲಿ ಬಿಜೆಪಿ ಸದಸ್ಯರಾದ ವಿ. ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ, ಕೆ.ಜಿ.ಬೋಪಯ್ಯ, ಎಂ.ಪಿ.ಕುಮಾರಸ್ವಾಮಿ ಹಾಗೂ ಕುಮಾರ್ ಬಂಗಾರಪ್ಪ ಪ್ರಸ್ತಾಪಿಸಿದ ವಿಷಯಕ್ಕೆ ಸಂಬಂದಿಸಿದಂತೆ ಅರಣ್ಯ ಸಚಿವರ ಪರವಾಗಿ ಅವರು ಉತ್ತರ ನೀಡಿದರು. ಕೇಂದ್ರ ಸರಕಾರವು ಕಸ್ತೂರಿ ರಂಗನ್ ವರದಿಗೆ ಸಂಬಂದಿಸಿದಂತೆ 2018ರ ಅ. 3ರಂದು ನಾಲ್ಕನೆ ಕರಡು ಅಧಿಸೂಚನೆ ಹೊರಡಿಸಿದೆ. ಆದರೆ, ಈವರೆಗೆ ಅಂತಿಮ ಅಧಿಸೂಚನೆ ಹೊರಡಿಸಿಲ್ಲ. ಈ ಅಧಿಸೂಚನೆಯನ್ನು ರದ್ದುಪಡಿಸುವಂತೆ ಕೇಂದ್ರ ಸರಕಾರಕ್ಕೆ ಮುಖ್ಯಮಂತ್ರಿ ಪತ್ರ ಬರೆದು ಕೋರಿದ್ದಾರೆ. ಅಲ್ಲದೆ, ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಿದ್ದು, ಈ ತಿಂಗಳ ಅಂತ್ಯದೊಳಗೆ ಸಮಿತಿಯು ತನ್ನ ವರದಿಯನ್ನು ಕೇಂದ್ರ ಸರಕಾರಕ್ಕೆ ಕಳುಹಿಸಲಿದೆ ಎಂದು ಸುರೇಶ್ ಕುಮಾರ್ ಹೇಳಿದರು.
ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್‍ಜಿಟಿ)ವು ಕಸ್ತೂರಿ ರಂಗನ್ ವರದಿ ಜಾರಿ ಸಂಬಂಧ ಹೊರಡಿಸಿರುವ ಆದೇಶದ ಕುರಿತು ಕಾನೂ ನು ಇಲಾಖೆಯು ಗಂಭೀರವಾಗಿ ಪರಿಗಣಿಸಿದೆ. ವರದಿಯನ್ನು ನಾವು ಯಾವ ರೀತಿ ಅಳವಡಿಸಿಕೊಳ್ಳಬಹುದು, ಜೊತೆಗೆ ಯಾವುದೆ ಗ್ರಾಮ ವನ್ನು ಒಕ್ಕಲೆಬ್ಬಿಸದಂತೆ, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅವಕಾಶ ಕಲ್ಪಿಸುವುದು ಹೇಗೆ ಎಂಬುದರ ಬಗ್ಗೆ ಸರಕಾರದ ವತಿಯಿಂ ದ ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.