ರೈತರ ಆತ್ಮಹತ್ಯೆ : ವಿವರ ಕೇಳಿದ ಕೋರ್ಟ್

December 12, 2020

ಬೆಂಗಳೂರು ಡಿ.12 : ಪ್ರಮುಖ ಬೆಳವಣಿಗೆಯಲ್ಲಿ, ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಹಾಯ ಹಸ್ತ ಚಾಚುವುದಕ್ಕಾಗಿ ಯಾವುದಾದರೂ ಯೋಜನೆ ಇದ್ದರೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಶುಕ್ರವಾರ ಹೈಕೋರ್ಟ್ ನಿರ್ದೇಶನ ನೀಡಿದೆ.
ಅರ್ಜಿದಾರರು ನೀಡಿದ ರೈತರ ಆತ್ಮಹತ್ಯೆಯ ಅಂಕಿ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಮೃತ ರೈತರ ಕುಟುಂಬಗಳಿಗೆ ನೀಡಿದ ನೆರವು/ ಪರಿಹಾರದ ವಿವರಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ(ಪಿಎಂಎಫ್‍ಬಿವೈ)ಯನ್ನು ರಾಜ್ಯದಲ್ಲಿ ಜಾರಿಗೊಳಿಸಲು ವಿಫಲವಾದ ಬಗ್ಗೆ ಅಖಿಲ ಕರ್ನಾಟಕ ರೈತ ಸಂಘ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ವಿಭಾಗೀಯ ಪೀಠ ಈ ಆದೇಶವನ್ನು ನೀಡಿದೆ.

error: Content is protected !!