ಸಾರ್ವಜನಿಕ ಆರೋಗ್ಯ ಸಂಸ್ಥೆಯ ಜಂಟಿ ನಿರ್ದೇಶಕರಾಗಿ ಡಾ. ಓ.ವಿ.ಕೃಷ್ಣಾನಂದ ನೇಮಕ

December 14, 2020

ಮಡಿಕೇರಿ ಡಿ. 14 : ಸಾರ್ವಜನಿಕ ಆರೋಗ್ಯ ಸಂಸ್ಥೆಯ ಜಂಟಿ ನಿರ್ದೇಶಕರಾಗಿ ಹಿರಿಯ ಮಕ್ಕಳತಜ್ಞ ಡಾ. ಓ.ವಿ.ಕೃಷ್ಣಾನಂದ ಅವರನ್ನು ನೇಮಕ ಮಾಡಲಾಗಿದೆ.
ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಹಲವು ವರ್ಷಗಳು ಮಕ್ಕಳ ವೈದ್ಯರಾಗಿ ಸೇವೆಸಲ್ಲಿಸಿದ್ದು, ಪ್ರಸ್ತುತ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಹಿರಿಯ ಮಕ್ಕಳ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ರಾಜ್ಯ ಸಾರ್ವಜನಿಕ ಆರೋಗ್ಯ ಸಂಸ್ಥೆಯ ಜಂಟಿ ನಿರ್ದೇಶಕರನ್ನಾಗಿ ಸರ್ಕಾರ ನೇಮಿಸಿ ಬೆಂಗಳೂರಿಗೆ ವರ್ಗಾಯಿಸಲಾಗಿದೆ.

error: Content is protected !!