ಕೊಡಗು ಜಿಲ್ಲಾ ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರ : ಅರ್ಜಿ ಸಲ್ಲಿಸಲು ಡಿ.31 ಕೊನೆ ದಿನ

14/12/2020

ಮಡಿಕೇರಿ ಡಿ. 14 : ಪ್ರತಿ ವರ್ಷದಂತೆ ಈ ಬಾರಿಯು ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಡಿ.31ರ ಒಳಗೆ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸುವಂತೆ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು 2020ನೇ ಸಾಲಿನ ಹತ್ತನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ಒಕ್ಕಲಿಗ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮ ಅಂಕಪಟ್ಟಿಯ ಪ್ರತಿ ಮತ್ತು ಫೋಟೊದೊಂದಿಗೆ ಕೊಡಗು ಜಿಲ್ಲಾ ಒಕ್ಕಲಿಗರ ಸಂಘ, ಕಾಫಿ ಕೃಪ ಬಿಲ್ಡಿಂಗ್, ರಾಜಾಸೀಟು ರಸ್ತೆ, ಮಡಿಕೇರಿ, ಈ ವಿಳಾಸಕ್ಕೆ ಕಳುಹಿಸುವಂತೆ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ 8762345577 ಸಂಪರ್ಕಿಸಬಹುದಾಗಿದೆ.