ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ
December 14, 2020

ಮಡಿಕೇರಿ ಡಿ.14 : ಗ್ರಾಮ ಪಂಚಾಯತ್ ಚುನಾವಣೆ-2020 ರ ಸಂಬಂಧ ಕೊಡಗು ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಮಸ್ಟರಿಂಗ್, ಡಿ ಮಸ್ಟರಿಂಗ್ ಮತ್ತು ಭದ್ರತಾ ಕೊಠಡಿಗಳನ್ನು ಗುರುತಿಸಲಾಗಿದ್ದು, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ನಗರದ ಸಂತ ಜೋಸೆಫರ ಕಾನ್ವೆಂಟ್ ಶಾಲೆಯಲ್ಲಿ ಗುರುತಿಸಿರುವ ಮಡಿಕೇರಿ ತಾಲ್ಲೂಕಿನ ಮಸ್ಟರಿಂಗ್, ಡಿ ಮಸ್ಟರಿಂಗ್ ಕೇಂದ್ರ ಮತ್ತು ಭದ್ರತಾ ಕೊಠಡಿಗಳಿಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಸಂತ ಜೋಸೆಫರ ಕಾನ್ವೆಂಟ್ ಶಾಲೆ, ವಿರಾಜಪೇಟೆ ತಾಲ್ಲೂಕು ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹಾರಂಗಿ ರಸ್ತೆ, ಗುರ್ತಿಸಲಾಗಿದೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಿಲೇಶ್, ಮಡಿಕೇರಿ ತಹಶೀಲ್ದಾರ್ ಮಹೇಶ್, ಡಿ.ವೈ.ಎಸ್.ಪಿ ದಿನೇಶ್ ಕುಮಾರ್, ನಗರ ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ, ನಗರಸಭೆಯ ಪೌರಾಯುಕ್ತರಾದ ರಾಮದಾಸ್ ಹಾಜರಿದ್ದರು.
