ಮಡಿಕೇರಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

December 15, 2020

ಮಡಿಕೇರಿ ಡಿ. 15 : ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ನಗರದ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷರಾದ ಸ್ವಾಮಿ ಬೋಧಸ್ವರೂಪಾನಂದಜೀ ಮಹಾರಾಜ್ ಉದ್ಘಾಟಿಸಿದರು.
ಈ ಸಂದರ್ಭ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವಿಷ್ಣುಮೂರ್ತಿ, ಪತ್ರಕರ್ತರಾದ ಅನಂತಶಯನ, ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಸಿ.ಎಂ.ಮಹಾಲಿಂಗಯ್ಯ, ಖಜಾಂಚಿ ಎಸ್.ಟಿ.ಪುರುಷೋತ್ತಮ, ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪಿ.ಆರ್.ವಿಜಯ ಇತರರು ಪಾಲ್ಗೊಂಡಿದ್ದರು.

error: Content is protected !!