ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 5571

December 16, 2020

ಮಡಿಕೇರಿ ಡಿ. 16 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 24 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
19 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 5 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 9 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 7 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 9 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 9 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5571 ಆಗಿದ್ದು, 5344 ಮಂದಿ ಗುಣಮುಖರಾಗಿದ್ದಾರೆ. 153
ಸಕ್ರಿಯ ಪ್ರಕರಣಗಳಿದ್ದು, 74 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 74 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!