ಬ್ರಿಟನ್ ಪ್ರಧಾನಿ ಗಣರಾಜ್ಯ ದಿನದ ಅತಿಥಿ

16/12/2020

ನವದೆಹಲಿ ಡಿ.16 : 2021ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಭಾರತ ನೀಡಿದ್ದ ಆಹ್ವಾನವನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸ್ವೀಕರಿಸಿದ್ದಾರೆ.
ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್, ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜೊತೆಗಿನ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ದೃಢಪಡಿಸಿದರು. ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆಗಮಿಸುತ್ತಿರುವುದಾಗಿ ಹೇಳಿದರು.
ಜನವರಿಯಲ್ಲಿ ನಡೆಯಲಿರುವ ಭಾರತದ ಗಣರಾಜ್ಯೋತ್ಸವ ದಿನದ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವುದು ದೊಡ್ಡ ಗೌರವವಾಗಿದೆ. ಭಾರತದ ಆಹ್ವಾನವನ್ನು ಬ್ರಿಟನ್ ಪ್ರಧಾನಿ ಜಾನ್ಸನ್ ಸ್ವೀಕರಿಸಿದ್ದಾರೆ ಎಂದರು.
ಮುಂದಿನ ವರ್ಷ ಬ್ರಿಟನ್ ಆಯೋಜಿಸಿರುವ ಜಿ-7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿಯನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆಹ್ವಾನಿಸಿರುವುದು ಅತೀವ ಸಂತೋಷವನ್ನುಂಟು ಮಾಡಿದೆ ಎಂದು ಡೊಮಿನಿಕ್ ರಾಬ್ ಹೇಳಿದರು.