Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:06 AM Tuesday 26-October 2021

ಪೊನ್ನಂಪೇಟೆಯ ಕೂರ್ಗ್ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಹೊರ ಹೊಮ್ಮಿದ ಬಹುಮುಖ ಪ್ರತಿಭೆ ಶರಣ್ಯರಾವ್

16/12/2020

ಮಡಿಕೇರಿ ಡಿ. 16 : CIT ಪೊನ್ನಂಪೇಟೆಯಲ್ಲಿ 2017-18ರಲ್ಲಿ ತಮ್ಮ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪಡೆದ ಶರಣ್ಯರಾವ್ ಹೆಚ್, ನಮ್ಮ ಕಾಲೇಜಿನ ಬಹುಮುಖ ಪ್ರತಿಭೆ. ಶ್ರೀಮತಿ ಮೈಥಿಲಿ ರಾವ್ ಹಾಗೂ ಶ್ರೀ ಹರೀಶ್ ರಾವ್ ದಂಪತಿಯ ಪುತ್ರಿಯಾದ ಇವರು ತಮ್ಮ ಬಾಲ್ಯದಿಂದಲೇ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವ ಕನಸು ಹೊತ್ತವರು. ಇವರ ಕನಸಿಗೆ ನೀರೆರದು ಪೋಷಿಸಿ, ಪ್ರೋತ್ಸಾಹಿಸಿದ ತಮ್ಮ ತಂದೆ, ತಾಯಿ, ಬಂಧುಮಿತ್ರರರು ಹಾಗೂ ಪ್ರಮುಖವಾಗಿ CIT ಕಾಲೇಜಿನ ಆಡಳಿತ ಮಂಡಳಿ, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರ ಪ್ರೋತ್ಸಾಹ ಹಾಗೂ ಬೆಂಬಲ ಗಮನಾರ್ಹವಾದದು. ಶರಣ್ಯರಾವ್ ರವರು ಸಾಕಷ್ಟು ಸ್ಪರ್ಧಾತ್ಮಕ ಪರೀಕ್ಷೆಗಳಾದ C.D.S,   S S B ಗಳನ್ನು ಉನ್ನತ ದರ್ಜೆಗಳಲ್ಲಿ ಪೂರ್ಣಗೊಳಿಸಿರುತ್ತಾರೆ.

ಶರಣ್ಯರಾವ್ ಸಾಧನೆ : ಶರಣ್ಯರಾವ್ ರವರು 2018-19 ರ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಿಂದ ಅಂತಿಮ ಪರೀಕ್ಷೆಗೆ ಹಾಜರಾಗಿದ್ದ ರಾಜ್ಯದ ಅಂದಾಜು 20,000 ಸಾವಿರ ವಿದ್ಯಾರ್ಥಿಗಳ ಪೈಕಿ ಮೊದಲ 12 ವಿದ್ಯಾರ್ಥಿಗಳಲ್ಲಿ ಒಬ್ಬರಾಗಿ ಹೊರ ಹೊಮ್ಮಿರುತ್ತಾರೆ. ಇವರು ಕೇವಲ 0.65% ಅಂಕದ ಅಂತರದಲ್ಲಿ ವಿಶ್ವವಿದ್ಯಾಲಯ ರ್ಯಾಂಕ್‍ನಿಂದ ವಂಚಿತರಾಗಿರುತ್ತಾರೆ.

ಭಾರತೀಯ ಸೇನೆಯು ನಡೆಸುವ ಮಹಿಳಾ ವಿಭಾಗದ Short Service Commission (Tech) ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಮೊದಲನೇ ರ್ಯಾಂಕ್ ಪಡೆದಿರುತ್ತಾರೆ.

ರಾಷ್ಟ್ರೀಯ ಮಟ್ಟದ ಬಾಸ್ಕೆಟ್‍ಬಾಲ್, ಹ್ಯಾಂಡ್‍ಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಿರುತ್ತಾರೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU, ಬೆಳಗಾವಿ) ವತಿಯಿಂದ ಬಾಸ್ಕೆಟ್‍ಬಾಲ್, ಹ್ಯಾಂಡ್‍ಬಾಲ್, ಫುಟ್‍ಬಾಲ್ ಕ್ರೀಡೆಯಲ್ಲಿ – ದಕ್ಷಿಣ ವಲಯದಲ್ಲಿ ಪ್ರತಿನಿದಿಸಿರುತ್ತಾರೆ.

2016-17 ರ ದೆಹಲಿ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿರುತ್ತಾರೆ.

ಭಾರತೀಯ ನೌಕಾಪಡೆಯವರು ನಡೆಸುವ INET ಪರೀಕ್ಷೆಯನ್ನು ಉತ್ತಮ ದರ್ಜೆಯಲ್ಲಿ ಪೂರ್ಣಗೊಳಿಸಿರುತ್ತಾರೆ.

ಇವರು 2016 – 17 ರ “ಮಿಸ್ ಕರ್ನಾಟಕ” ಸ್ಪರ್ದೆಯಲ್ಲಿ ರನ್ನರ್ ಅಪ್ ಪ್ರಶಸ್ತಿ ಪಡೆದಿರುತ್ತಾರೆ.

ಇವರ ಉಜ್ವಲ ಹಾಗೂ ಉತ್ತಮ ಭವಿಷ್ಯಕ್ಕೆ CIT ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗದವರು ಶುಭಹಾರೈಸಿರುತ್ತಾರೆ.