ಪ್ರವಾಸಿಗರು ನಿಯಮ ಮೀರಿದರೆ ದಂಡ ಖಚಿತ : ಕೊಡಗು ಜಿಲ್ಲಾಡಳಿತ ಎಚ್ಚರಿಕೆ
December 16, 2020

ಮಡಿಕೇರಿ ಡಿ. 16 : ಪ್ರಕೃತಿ ಪ್ರಿಯರ ಗಮನ ಸೆಳೆದಿರುವ ಪ್ರವಾಸಿತಾಣ ಕೊಡಗು ಜಿಲ್ಲೆಗೆ ಹೊಸ ವರ್ಷದ ಸ್ವಾಗತಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದ್ದು, ಜಿಲ್ಲಾಡಳಿತ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ರೆಸಾರ್ಟ್, ಲಾಡ್ಜ್, ಹೊಟೇಲ್ ಮತ್ತು ಹೋಂಸ್ಟೇಗಳಿಗೆ ಕೋವಿಡ್ ಮಾರ್ಗಸೂಚಿಯ ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಕೊರೋನಾ ನಿಯಮ ಉಲ್ಲಂಘಿಸಿದರೆ ಸಂಬಂಧಿಸಿದ ಮಾಲೀಕರು ಹಾಗೂ ಪ್ರವಾಸಿಗರಿಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
