ಮಡಿಕೇರಿ ರಸ್ತೆ ಕಾಮಗಾರಿ ಕಳಪೆ : ಸಾರ್ವಜನಿಕರ ಅಸಮಾಧಾನ

December 16, 2020

ಮಡಿಕೇರಿ ಡಿ. 16 : ಮಡಿಕೇರಿ ನಗರದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಅಭಿವೃದ್ಧಿ ಕಾಣದ ನಗರದ 23 ವಾರ್ಡ್‍ಗಳಲ್ಲಿ ಡಾಮರೀಕರಣ ಕಾರ್ಯ ನಡೆಯುತ್ತಿದೆ. ಆದರೆ ಎಲ್ಲೂ ಗುಣಮಟ್ಟದ ಕಾಮಗಾರಿ ನಡೆಯುತ್ತಿಲ್ಲವೆಂದು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಡಾಮರು ನಡೆದಾಡುವಾಗಲೇ ಎದ್ದು ಬರುತ್ತಿದೆ ಎಂದು ಆರೋಪಿಸಿರುವ ನಾಗರೀಕರು, ಜಿಲ್ಲಾಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

error: Content is protected !!