ಮತದಾನದ ಮಹತ್ವ : ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

16/12/2020

ಮಡಿಕೇರಿ ಡಿ.16 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಗ್ರಾಮೀಣ ಭಾಗದ ಮತದಾರರಲ್ಲಿ ‘ಮತದಾನದ ಮಹತ್ವ’ ಕುರಿತ ಜಾಗೃತಿ ಮೂಡಿಸುವ ಬೀದಿನಾಟಕ ಮತ್ತು ಜಾನಪದ ಸಂಗೀತ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಬುಧವಾರ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಚಾಲನೆ ನೀಡಿದರು.
ಪ್ರಜಾಪ್ರಭುತ್ವ ಬಲಪಡಿಸುವ ನಿಟ್ಟಿನಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಕರೆ ನೀಡಿದರು.
ಜಿಲ್ಲೆಯ ಮೂರು ತಾಲ್ಲೂಕಿನ ಆಯ್ದ ಗ್ರಾ.ಪಂ.ವ್ಯಾಪ್ತಿಯಲ್ಲಿ 10 ದಿನಗಳ ಕಾಲ ಬೀದಿನಾಟಕ ಮತ್ತು ಸಂಗೀತ ಕಾರ್ಯಕ್ರಮದ ಮೂಲಕ ‘ಮತದಾನದ ಮಹತ್ವ’ ಕುರಿತು ಜಾಗೃತಿ ಅಭಿಯಾನ ನಡೆಯಲಿದೆ ಎಂದು ವಾರ್ತಾಧಿಕಾರಿ ಚಿನ್ನಸ್ವಾಮಿ ತಿಳಿಸಿದರು. ಕಲಾವಿದ ರಾಜು ಮತ್ತು ತಂಡದವರು ಮತದಾನದ ಮಹತ್ವ ಕುರಿತು ಜಾಗೃತಿ ಗೀತೆ ಹಾಡಿದರು.