Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
9:01 PM Sunday 17-October 2021

ಪ್ರತಿಭಾ ಪುರಸ್ಕಾರ : ನಿರ್ದಿಷ್ಟ ಗುರಿ ಇದ್ದಾಗ ಶೈಕ್ಷಣಿಕ ಯಶಸ್ಸು ಸಾಧ್ಯ : ಹಿರಿಯ ಪತ್ರಕರ್ತ ಬಿ.ಜಿ.ಅನಂತಶಯನ

16/12/2020

ಮಡಿಕೇರಿ ಡಿ.16 : ನಿರ್ದಿಷ್ಟ ಗುರಿ ಇದ್ದಾಗ ಮಾತ್ರ ವಿದ್ಯಾರ್ಥಿಗಳು ಶೈಕ್ಷಣಿಕ ಯಶಸ್ಸು ಸಾಧಿಸಲು ಸಾಧ್ಯವೆಂದು ಹಿರಿಯ ಪತ್ರಕರ್ತ ಬಿ.ಜಿ.ಅನಂತಶಯನ ತಿಳಿಸಿದ್ದಾರೆ.
ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ, ನೂರು ಫಲಿಂತಾಂಶ ಪಡೆದ ಕಾಲೇಜುಗಳಿಗೆ ಹಾಗೂ ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಗರದ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು.
ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೆರವೇರಿಸಿ ಮಾತನಾಡಿ ವಿದ್ಯಾರ್ಥಿಗಳು ಅಂಕಗಳಿಸುವುದರ ಜೊತೆಗೆ ನಿರ್ದಿಷ್ಟ ಗುರಿ ಹೊಂದಿರಬೇಕು ಎಂದರು. ಪ್ರಸ್ತುತ ಸಮಾಜದಲ್ಲಿ ಹಲವಾರು ಸಮಸ್ಯೆಗಳಿದ್ದು, ಇದನ್ನು ಮೀರಿ ಪ್ರಗತಿ ಸಾಧಿಸಬೇಕೆಂದು ಅನಂತಶಯನ ಹೇಳಿದರು.
ಪೆÇನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷರಾದ ಸ್ವಾಮಿ ಬೋಧಸ್ವರೂಪಾನಂದಜೀ ಮಹಾರಾಜ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಬಾಹುಬಲ, ಬುದ್ಧಿಬಲ, ಆತ್ಮಬಲ ಎಂಬ ವಿಚಾರವಾಗಿ ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವಿಷ್ಣುಮೂರ್ತಿ ಅವರು 2019-20ನೇ ಸಾಲಿನಲ್ಲಿ ಕೊಡಗು ಜಿಲ್ಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಮುಂದಿನ ದಿನಗಳಲ್ಲಿ ಮೊದಲನೆ ಸ್ಥಾನವನ್ನು ಪಡೆದುಕೊಳ್ಳುವಂತಾಗಬೇಕು ಎಂದು ಪ್ರಾಂಶುಪಾಲರಿಗೆ ಸೂಚಿಸಿದರು. ಅಖಿಲಾ ಪ್ರಾರ್ಥಿಸಿದರು. ಉಪನ್ಯಾಸಕರಾದ ನಂದೀಶ್ ನಿರೂಪಿಸಿದರು. ಬೆಳ್ಳಿಯಪ್ಪ ಅವರು ಸ್ವಾಗತಿಸಿ, ವಂದಿಸಿದರು.