ಡಾಟಾ ಎಂಟ್ರಿ ಆಪರೇಟರ್ ಮತ್ತು ಸೆಲ್ಫ್ ಎಂಪ್ಲಾಯಿಡ್ ಟೈಲರ್ ತರಬೇತಿಗೆ ಅರ್ಜಿ ಆಹ್ವಾನ

December 17, 2020

ಮಡಿಕೇರಿ ನ.17 : ನಗರಸಭೆಯಲ್ಲಿ ಅನುಷ್ಠಾನದಲ್ಲಿರುವ ಡೇ-ನಲ್ಮ್ ಯೋಜನೆಯ ತರಬೇತಿ ಮತ್ತು ಸ್ಥಳ ನಿಯುಕ್ತಿ ಘಟಕದಡಿ 2018-19 ಮತ್ತು 2019-20 ನೇ ಸಾಲಿನಲ್ಲಿ ಮಡಿಕೇರಿ ನಗರಸಭೆ ವ್ಯಾಪ್ತಿಯ ಅರ್ಹ ನಿರುದ್ಯೋಗಿ ಯುವಕ, ಯುವತಿಯರಿಂದ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್ ಮತ್ತು ಸೆಲ್ಫ್ ಎಂಪ್ಲಾಯಿಡ್ ಟೈಲರ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಡಿಸೆಂಬರ್, 30 ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ ಪಡಿತರ ಚೀಟಿ, ಆಧಾರ್ ಕಾರ್ಡ್, ಜಾತಿ, ಆದಾಯ, ವಿದ್ಯಾರ್ಹತೆ ದೃಢೀಕರಣ ಮತ್ತು ಭಾವಚಿತ್ರ-2 ಲಗತ್ತಿಸಬೇಕು ಎಂದು ನಗರಸಭೆ ಪೌರಾಯುಕ್ತರಾದ ಎಸ್.ವಿ.ರಾಮದಾಸ್ ಅವರು ತಿಳಿಸಿದ್ದಾರೆ.

error: Content is protected !!