ವಂಚಕ ಯುವರಾಜ್ ಬಂಧನ

December 17, 2020

ಬೆಂಗಳೂರು ಡಿ.17 : ಆರ್‍ಎಸ್‍ಎಸ್ ನಾಯಕರು, ಅಮಿತ್ ಶಾ ಹಾಗೂ ಜೆಪಿ ನಡ್ಡಾ ಸೇರಿ ಇತರೆ ಬಿಜೆಪಿ ನಾಯಕರ ಹೆಸರು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಯುವರಾಜ್ ಎಂಬಾತನ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಯುವರಾಜ್, ಬಿಜೆಪಿ ನಾಯಕರೊಂದಿಗೆ ಭಾವಚಿತ್ರ ತೆಗೆಸಿಕೊಂಡು ತಾನು ಬಹಳಷ್ಟು ಮಂದಿ ಬಿಜೆಪಿ ನಾಯಕರೊಂದಿಗೆ ಆತ್ಮೀಯನಾಗಿದ್ದೇನೆ ಎಂದು ನಂಬಿಸುತ್ತಿದ್ದನು.
ಕೆಎಸ್ ಆರ್ ಟಿಸಿ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ಹೇಳಿ ನನ್ನಿಂದ ಹಣ ಪಡೆದಿದ್ದು, ನಂತರ ಯಾವುದೇ ಹುದ್ದೆ ಕೊಡಿಸದೇ ವಂಚಿಸಿದ್ದಾನೆ ಎಂದು ಆರೋಪಿಸಿ ಯುವರಾಜ್ ವಿರುದ್ಧ ಇತ್ತೀಚಿಗೆ ಉದ್ಯಮಿ ಸುಧೀಂದ್ರ ರೆಡ್ಡಿ ಎಂಬುವವರು ಸಿಸಿಬಿ ಗೆ ದೂರು ನೀಡಿದ್ದರು.
ಈ ಕುರಿತು ಮಾಹಿತಿ ಪಡೆದ ಸಿಸಿಬಿ ಪೆÇಲೀಸರು, ಯುವರಾಜ್ ನಾಗರಭಾವಿ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!