ಸೋಮವಾರಪೇಟೆಯಲ್ಲಿ ರಾಷ್ಟ್ರೀಯ ಮತದಾನ ದಿನಾಚರಣೆ

ಮಡಿಕೇರಿ ಡಿ. 17 : ರಾಷ್ಟ್ರೀಯ ಮತದಾನ ದಿನಾಚರಣೆ ಅಂಗವಾಗಿ ಪದವಿ ಪೂರ್ವ ಕಾಲೇಜು ವಿಭಾಗದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳು ಸೋಮವಾರಪೇಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ಬಿ.ಎಂ.ಬೆಳ್ಳಿಯಪ್ಪ ಮಾತನಾಡಿದರು. ವಿದ್ಯಾರ್ಥಿಗಳು ಮತದಾನದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. 18 ವರ್ಷ ತುಂಬಿದ ಪ್ರತಿಯೊಬ್ಬರು ಚುನಾವಣೆಯಲ್ಲಿ ಮತದಾನ ಮಾಡಿ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕೆಂದು ಕಿವಿಮಾತು ಹೇಳಿದರು.
ಯಾವುದೇ ಆಮೀಷಗಳಿಗೆ ಬಲಿಯಾಗದೆ ನೈತಿಕ ಮತದಾನ ಮಾಡುವಂತೆ ತಮ್ಮ ನೆರೆಹೊರೆಯವರಿಗೆ ತಿಳಿ ಹೇಳಬೇಕು ಎಂದರು.
ತಾಲ್ಲೂಕಿನ ವಿವಿಧ ಕಾಲೇಜುಗಳ ಉಪನ್ಯಾಸಕರಾದ ಕೆ.ಎಂ.ಚಂದ್ರಶೇಖರ್, ಹೇಮಕುಮಾರ್, ವಿ.ಜಿ.ಶಾಂತಿ, ಶಿವಪ್ರಕಾಶ್, ವಿನುತ, ರಮ್ಯ, ಎಂ.ಬಿ.ತಿಲೋತ್ತಮೆ, ಬಿ.ಬಿ.ಲಲಿತ, ಎಚ್.ಪಿ.ಶಮಂತ್, ಕೆ.ಎಂ.ಚಂದ್ರಶೇಖರ್ ಇದ್ದರು. ಕನ್ನಡ ಮತ್ತು ಇಂಗ್ಲೀಷ್ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಇನ್ನಿತರ ಸ್ಪರ್ಧೆಗಳು ನಡೆದವು. ತಾಲೂಕಿನ ವಿವಿಧ ಕಾಲೇಜುಗಳ 55 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
