ಸುಂಟಿಕೊಪ್ಪದಲ್ಲಿ ಶ್ರೀವಿಷ್ಣುಮೂರ್ತಿ ಶಾಸ್ತ, ಗುಳಿಗ ಕಲ್ಲುಗಳಿಗೆ ಹಾನಿ

December 17, 2020

ಮಡಿಕೇರಿ ಡಿ. 17 : ಸುಂಟಿಕೊಪ್ಪದ ಶ್ರೀ ಚಾಮುಂಡೇಶ್ವರಿ ಹಾಗೂ ಶ್ರೀಮುತ್ತಪ್ಪ ದೇವಾಲಯದ ಬಳಿ ಪ್ರತಿಷ್ಠಾಪಿಸಲ್ಪಟ್ಟಿದ್ದ ಶ್ರೀವಿಷ್ಣುಮೂರ್ತಿ ಶಾಸ್ತ, ಗುಳಿಗ ಕಲ್ಲುಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದು, ಈ ಬಗ್ಗೆ ದೇವಾಲಯ ಜೀರ್ಣೋದ್ಧಾರ ಸಮಿತಿ ಪೊಲೀಸರಿಗೆ ದೂರು ಸಲ್ಲಿಸಿದೆ.

ರಾತ್ರಿ ವೇಳೆಯಲ್ಲಿ ಈ ಕೃತ್ಯ ನಡೆದಿರುವ ಬಗ್ಗೆ ದೂರಿನಲ್ಲಿ ಶಂಕೆ ವ್ಯಕ್ತಪಡಿಸಲಾಗಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ದೇವಾಲಯ ಸಮಿತಿ ಅಧ್ಯಕ್ಷ ವೈ.ಎಂ.ಕರುಂಬಯ್ಯ ಹಾಗೂ ಪದಾಧಿಕಾರಿಗಳು ದೂರು ಸಲ್ಲಿಸುವ ಸಂದರ್ಭ ಹಾಜರಿದ್ದರು.

error: Content is protected !!