ಕಾರ್ಯಪ್ಪ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

December 17, 2020

ಮಡಿಕೇರಿ ಡಿ. 17 : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಪೊಲೀಸ್ ಠಾಣೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಮತ್ತು ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಠಾಣೆಯ ಪೊಲೀಸ್ ನಿರೀಕ್ಷಕ ಪಿ.ಪಿ.ಸೋಮೆಗೌಡ ಮಾತನಾಡಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ, ಪೋಕ್ಸೋ ಕಾಯ್ದೆ ಮತ್ತು ಅಪರಾಧ ತಡೆಯುವ ಬಗ್ಗೆ ಮಾಹಿತಿ ನೀಡಿದರು.
ಸಭಾ ಕಾರ್ಯಕ್ರಮದ ನಂತರ ಮಹಿಳಾ ಠಾಣೆಯ ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಚರ್ಚೆ ಮತ್ತು ಸಂವಾದ ನಡೆಸಿದರು.

ಕಾರ್ಯಕ್ರಮದಲ್ಲಿ ವಕೀಲ ಪವನ್ ಪೆಮ್ಮಯ್ಯ, ಕೊಡಗು ರಕ್ಷಣಾ ವೇದಿಕೆಯ ಮಹಿಳಾಧ್ಯಕ್ಷೆ ರಷ್ಮಿ, ಎಸ್.ಜೆ.ಪಿ.ಘಟಕದ ಸುಮತಿ, ಎ.ಎಸ್.ಐ ವಾಣಿಶ್ರೀ, ಮಹಿಳಾ ಠಾಣೆಯ ಮೈನಾ ಕುಮಾರಿ, ಶೋಭನಾ, ಸೌಮ್ಯ ಮತ್ತು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜ್‍ನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.

error: Content is protected !!