ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ

December 17, 2020

ಬೆಂಗಳೂರು:ಸಿಐಡಿ ವಿಭಾಗದ ಡಿವೈಎಸ್‌ಪಿ ಲಕ್ಷ್ಮೀ (33) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.

ಅನ್ನಪೂರ್ಣೇಶ್ವರಿ ನಗರದಲ್ಲಿ ಪರಿಚಯಸ್ಥರ ಮನೆಗೆ ಊಟಕ್ಕೆಂದು ಹೋಗಿದ್ದ ಸಂದರ್ಭದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೂಲತಃ ಕೋಲಾರದ ಮಾಲೂರಿನವರಾಗಿರುವ ಲಕ್ಷ್ಮೀ ಕೋಣನಕುಂಟೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು.

ಲಕ್ಷ್ಮೀ ಅವರು 2014ರ ಬ್ಯಾಚ್‌ನ ಕೆಪಿಎಸ್‌ಸಿ ಅಧಿಕಾರಿಯಾಗಿದ್ದು, 2017ರಲ್ಲಿ ನೇಮಕವಾಗಿದ್ದ ಲಕ್ಷ್ಮೀ ಅವರು ಡಿವೈಎಸ್‌ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಘಟನಾ ಸ್ಥಳಕ್ಕೆ ಅನ್ನಪೂರ್ಣೇಶ್ವರ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣದ ದಾಖಲಿಸಿಕೊಂಡಿದ್ದಾರೆ.ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ತನಿಖೆ ಮುಂದುವರೆದಿದೆ.

error: Content is protected !!