ಡಿ.25 ರಿಂದ ಬ್ಯಾಂಕಿಂಗ್ ಪರೀಕ್ಷಾ ಪೂರ್ವ ತರಬೇತಿ

December 17, 2020

ಮಡಿಕೇರಿ ಡಿ.17 : ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಈಗಾಗಾಗಲೇ ಬ್ಯಾಂಕಿಂಗ್ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವವರಿಗೆ ಪರೀಕ್ಷಾ ಪೂರ್ವ ತರಬೇತಿ ಏರ್ಪಡಿಸಲು ಉದ್ದೇಶಿಸಲಾಗಿದೆ. ಆ ದಿಸೆಯಲ್ಲಿ ಡಿಸೆಂಬರ್, 25 ರಿಂದ ಡಿಸೆಂಬರ್, 28 ರವರೆಗೆ ನಗರದಲ್ಲಿ ಬ್ಯಾಂಕಿಂಗ್ ಪರೀಕ್ಷಾ ಪೂರ್ವ ತರಬೇತಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಬ್ಯಾಂಕಿಂಗ್ ಪರೀಕ್ಷಾ ತರಬೇತಿಯಲ್ಲಿ ತೊಡಗಿಸಿಕೊಂಡಿರುವ ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ಮುಖ್ಯ ಪ್ರಬಂಧಕರಾದ ಆರ್.ಕೆ.ಬಾಲಚಂದ್ರ ಅವರು ನಡೆಸಿಕೊಡಲಿದ್ದಾರೆ ಎಂದು ಪ್ರಾಯೋಜಕರಾದ ನಬಾರ್ಡ್ ಸಹಾಯಕ ಮಹಾ ಪ್ರಬಂಧಕರು(ನಿವೃತ್ತ) ಮುಂಡಂಡ ಸಿ.ನಾಣಯ್ಯ ಅವರು ಕೋರಿದ್ದಾರೆ.
ಈಗಾಗಲೇ ಅರ್ಜಿ ಸಲ್ಲಿಸಿರುವವರು ತಮ್ಮ ಹೆಸರು ನೋಂದಾಯಿಸಲು ದೂ.ಸಂ. 9341421666, 9008180641, 9449148705, 8660360594 ಇಲ್ಲಿಗೆ ನೀಡಬೇಕಾಗಿ ಪ್ರಕಟಣೆ ಕೋರಿದೆ.

error: Content is protected !!